ಧರ್ಮಸ್ಥಳದ ಸೌಜನ್ಯ ಪ್ರಕರಣ ಮರು ತನಿಖೆ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,ಪ್ರಕರಣ ಕಾನೂನಾತ್ಮಕವಾಗಿ ಪೂರ್ಣಗೊಂಡಿದ್ದು, ಮರುತನಿಖೆ ಆಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ವಲಯದಲ್ಲಿ ಪರ, ವಿರೋಧ ಇದ್ದೇ ಇರುತ್ತದೆ. ಸೌಜನ್ಯ ಈ ಪ್ರಕರಣ ಮುಗಿದು ಹೋಗಿದ್ದು ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಮರು ತನಿಖೆ ವಿಚಾರ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.