ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಮತ್ತು ಹೆಗ್ಗಡೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎನ್ನಲಾಗುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕೋರ್ಟು ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದೆ.ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನ್ಯಾಯಾಲಯ ಆದೇಶ ಹೊರಡಿಸಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಹೆಗ್ಗಡೆ ಕುಟುಂಬಸ್ಥರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ ಹಾಗೂ ರಾಜಶೇಖರ್ ಹಿಲ್ಯಾರು ವಾದಿಸಿದ್ದರು. ಕಳೆದ ವಾರವೇ ಹೆಗ್ಗಡೆ ಕುಟುಂಬ ಕೋರ್ಟ್ ಮೆಟ್ಟಲು ಹತ್ತಿತ್ತು. ಇದೀಗ ಮಹೇಶ್ ಶೆಟ್ಟಿಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ಆದೇಶ ನೀಡಿದೆ.