ವಿವಾಹೇತರ ಸಂಬಂಧದಿಂದ ಜನಿಸಿದ ಮಕ್ಕಳು ಪಿತ್ರಾರ್ಜಿತ ಆಸ್ತಿ ಪಡೆಯಲು ಅರ್ಹರು: ಸುಪ್ರೀಂ ಕೋರ್ಟ್

ರಾಷ್ಟ್ರೀಯ

ವಿವಾಹೇತರ ಸಂಬಂಧದಿಂದ ಜನಿಸಿದ ಮಕ್ಕಳು ತಮ್ಮ ಹೆತ್ತವರ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರಾಗಿದ್ದಾರೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಂದೂ ಕಾನೂನಿನಿಂದ ನಿಯಂತ್ರಿಸಲ್ಪಡುವ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಿಗೆ ಮಾತ್ರ ಇದು ಅನ್ವಯಿಸುತ್ತದೆ ಎಂದು ಕೋರ್ಟ್‌ ತೀರ್ಪು ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠವು ತೀರ್ಪು ಪ್ರಕರಣವೊಂದರ ವಿಚಾರಣೆ ನಡೆಸಿ ಈ ತೀರ್ಪು ಪ್ರಕಟಿಸಿದೆ. 2011ರಲ್ಲಿ ಸಲ್ಲಿಕೆಯಾಗಿದ್ದ ಪ್ರಕರಣವೊಂದರ ವಿಚಾರಣೆ ನಡೆಸಿದ ಕೋರ್ಟ್‌, ಕಾನೂನು ಸಮ್ಮತ ವಿವಾಹ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯಲು ಹಕ್ಕಿದೆಯೇ ಅಥವಾ ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 16(3)ರಲ್ಲಿ ತಮ್ಮ ಪೋಷಕರ ಸ್ವಯಾರ್ಜಿತ ಆಸ್ತಿ ಮೇಲಷ್ಟೇ ಹಕ್ಕಿದೆಯೇ ಎಂಬ ಕುರಿತು ವಿಚಾರಣೆ ನಡೆಸಿತ್ತು.

ಅಂತಹ ಸಂಬಂಧದಲ್ಲಿ ಮಗುವಿನ ಜನನವು ಪೋಷಕರ ಸಂಬಂಧದಿಂದ ಸ್ವತಂತ್ರವಾಗಿ ನೋಡಬೇಕು. ಅಂತಹ ಸಂಬಂಧದಲ್ಲಿ ಜನಿಸಿದ ಮಗುವು ಇತರ ಮಕ್ಕಳಿಗೆ ನೀಡಲಾಗುವ ಎಲ್ಲಾ ಹಕ್ಕುಗಳಿಗೂ ಅರ್ಹವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.