ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಫಿಕ್ಸ್..ಅಂಜುಮನ್ ಅರ್ಜಿ ವಜಾ ಮಾಡಿದ ಕೋರ್ಟ್.!

ರಾಜ್ಯ

ಬಹಳಷ್ಟು ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಈ ಬಾರಿಯೂ ಅದ್ದೂರಿ ಗಣೇಶೋತ್ಸವ ಆಚರಿಸಲು ಧಾರವಾಡ ಹೈಕೋರ್ಟ್ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆಯು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ.

ಹುಬ್ಬಳ್ಳಿ ಈದ್ಗಾ ಮೈದಾನ ಮುಸ್ಲಿಮರಿಗೆ ಪ್ರಾರ್ಥನೆ ಮಾಡುವುದಕ್ಕೆ ಮಾತ್ರ ಇರುವ ಮೈದಾನ. ಇಲ್ಲಿ ಬೇರೆ ಧರ್ಮದ ಆಚರಣೆಗೆ ಅವಕಾಶ ನೀಡಬಾರದು ಎಂದು ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಂಸ್ಥೆ ವಾದ ಮಾಡಿತ್ತು. ಆದರೆ ಧಾರವಾಡ ಹೈಕೋರ್ಟ್ ಅಂಜುಮನ್ ಇಸ್ಲಾಂ ಸಂಸ್ಥೆಯ ಅರ್ಜಿಯನ್ನು ವಜಾಗೊಳಿಸಿ ಪೀಠ ಆದೇಶ ಹೊರಡಿಸಿದೆ. ಇದರಿಂದಾಗಿ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವುದು ಪಾಲಿಕೆಗೆ ಬಿಟ್ಟ ವಿಚಾರವಾಗಿದೆ. ಈಗಾಗಲೇ ಪಾಲಿಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ. ಕಳೆದ ಬಾರಿಯು ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಅದ್ದೂರಿ ಗಣೇಶೋತ್ಸವ ಇದೇ ಮೈದಾನದಲ್ಲಿ ನಡೆದಿತ್ತು. ಈ ಬಾರಿಯೂ ಮತ್ತೆ ಅಂಜುಮನ್ ಸಂಸ್ಥೆಗೆ ಹಿನ್ನಡೆಯಾಗಿದೆ.