ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ-HSRP ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
2019 ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17 ಈ ಪ್ರಕ್ರಿಯೆಗೆ ಕೊನೆಯ ದಿನವಾಗಿದೆ.
ಕೆಲವು ಕಡೆ ನಕಲಿಯಾಗಿ HSRP ಅಳವಡಿಸುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದ ಅಧಿಕೃತ HSRP ನಂಬರ್ ಪ್ಲೇಟ್ ಅಳವಡಿಸುವ ಪಟ್ಟಿಯನ್ನು ಸಾರಿಗೆ ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.