ಇಂದಿನಿಂದ ಸೆ.30 ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಣೆ

ರಾಜ್ಯ

ಸಾರ್ವಜನಿಕರ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಾಧಿಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಸೆಪ್ಟೆಂಬರ್ 23 ರಿಂದ ಸೆಪ್ಟೆಂಬರ್ 30 ರವರೆಗೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಕಾರ್ಯ ನಿರ್ವಹಿಸಲಿವೆ.

ಅಕ್ಟೋಬರ್ 1 ರಿಂದ ಮಾರ್ಗಸೂಚಿ ದರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಸ್ತಿ ನೋಂದಣಿಗಾಗಿ ನಾಗರೀಕರು ಸಬ್ ರಿಜಿಸ್ಟ್ರಾರ್ ಕಚೇರಿಗೆ ಮುಗಿ ಬೀಳುತ್ತಿದ್ದಾರೆ. ಪರಿಣಾಮ ಕಾವೇರಿ-2 ತಂತ್ರಾಂಶದಲ್ಲಿ ದೋಷ ಕಾಣಿಸಿಕೊಂಡು ಗುರುವಾರದಂದು ನೋಂದಣಿ ಪ್ರಕ್ರಿಯೆ ವಿಳಂಬವಾಗಿತ್ತು. ಸರ್ವರ್ ಸಮಸ್ಯೆಯಿಂದಾಗಿ ಹೆಚ್ಚಿನ ದಸ್ತಾವೇಜುಗಳ ನೋಂದಣಿ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಚೇರಿಗಳಲ್ಲಿ ಕೆಲಸದ ಅವಧಿ ವಿಸ್ತರಿಸಲಾಗಿದೆ.

ಸೆಪ್ಟೆಂಬರ್ 23 ನಾಲ್ಕನೇ ಶನಿವಾರದಂದೂ ಕೂಡಾ ಈ ಅವಧಿಯಲ್ಲಿ ಕಚೇರಿ ಕಾರ್ಯ ನಿರ್ವಹಿಸಲಿದ್ದು, ಈ ಕೆಲಸದ ಅವಧಿಯು ಸೆಪ್ಟೆಂಬರ್ 30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ತಿಳಿಸಿದ್ದಾರೆ.