ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಮಹಾತ್ಮಾ ಗಾಂಧಿ ಜಯಂತಿ ಆಚರಣೆ

ಕರಾವಳಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ಜಯಂತಿಯು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರಪಿತ ಬಾಪೂಜಿಯವರನ್ನು ಸ್ಮರಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಘದ ಗೌರಾಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಅವರು ಮಹಾತ್ಮ ಗಾಂಧೀಜಿ ಇಲ್ಲದ ಭಾರತವನ್ನು ಊಹಿಸಲು ಸಾಧ್ಯವಿಲ್ಲ. ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಗಾಂಧೀಜಿಯವರ ಅಹಿಂಸಾತ್ಮಕ ಹಾದಿಯಲ್ಲಿ ಎಂಥಹ ಬಲಾಡ್ಯರನ್ನು ಸೋಲಿಸಬಹುದು ಎಂದು ಜಗತ್ತಿಗೆ ತೋರಿಸಿಕೊಟ್ಟರು ಸ್ವತಂತ್ರ ಭಾರತದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಗಾಗಿ ಹೋರಾಡಿದರು ಗಾಂಧೀಜಿ ಯವರ ಸದ್ಭಾವನೆಯ ಚಿಂತನೆ ಎಲ್ಲ ಭಾರತೀಯರು ಮೈಗೂಡಿಸಿಕೊಳ್ಳಬೇಕು ಎಂದು ಅವರು ನುಡಿದರು.

ಡಿವೈಎಫ್ಐ ನಗರ ಅಧ್ಯಕ್ಷರಾದ ಜಗದೀಶ್ ಬಜಾಲ್,ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಉಪಾಧ್ಯಕ್ಷರಾದ ನೌಶಾದ್ ಉಳ್ಳಾಲ, ಮುಖಂಡರಾದ ಆಸೀಫ್ ಬಾವ ಉರುಮನೆ, ರೂಪೇಶ್, ಹನೀಫ್ ಸುರಲ್ಪಾಡಿ, ಮೇಬಲ್ ಡಿಸೋಜಾ,ರಿಯಾಜ್ ಎಲ್ಯರ್ ಪದವು, ಮುಂತಾದವರು ಉಪಸ್ಥಿತರಿದ್ದರು.