ಬಿಜೆಪಿ-ಜೆಡಿಎಸ್ ಪಕ್ಷದ ಅತೃಪ್ತ ಪ್ರಮುಖ ನಾಯಕರು ಕಾಂಗ್ರೆಸ್‍ನತ್ತ ಮುಖ.! ರಹಸ್ಯ ಮಾತುಕತೆ

ರಾಜ್ಯ

ಜೆಡಿಎಸ್-ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳಿಗೆ ಪೂರಕವಾಗಿ ಮತ್ತಷ್ಟು ಪ್ರಮುಖ ನಾಯಕರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರವರನ್ನು ಭೇಟಿ ಮಾಡಿದ್ದಾರೆ. ಶಾಸಕ ಮಂಜುನಾಥ್ ಅವರು ಸಿದ್ದರಾಮಯ್ಯನವರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ. ಸಿದ್ದುರವರನ್ನು ಭೇಟಿ ಮಾಡಿರುವ ಜೆಡಿಎಸ್‍ನ ಶಾಸಕರು ರಾಜಕೀಯ ಆಗುಹೋಗುಗಳ ಕುರಿತು ಚರ್ಚೆ ನಡೆಸಿದ್ದಾರೆ. ಮತ್ತೊಂದೆಡೆ ಬಿಜೆಪಿಯ ಶಶಿಕಲಾ ಜೊಲ್ಲೆ ಡಿ.ಕೆ.ಶಿ ಅವರನ್ನು ಭೇಟಿ ಮಾಡಿದ್ದಾರೆ.

ಕಾಂಗ್ರೆಸಿಗರು ಹಾಲಿ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಬದಲು ಮಾಜಿ ಪ್ರಭಾವಿ ಮುಖಂಡರನ್ನು ಕೇಂದ್ರೀಕರಿಸಿದ್ದಾರೆ. ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಜೆಡಿಎಸ್‍ನಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅತೃಪ್ತ ನಾಯಕರು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. ಅತ್ರಪ್ತ ನಾಯಕರುಗಳು ಹಂತ ಹಂತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಕೆಲವು ಪ್ರಭಾವಿ ನಾಯಕರುಗಳನ್ನು ವರಿಷ್ಠ ನಾಯಕರು ಕೆಪಿಸಿಸಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಸಿಕೊಂಡರೆ ಕೆಳ ಹಂತದ ನಾಯಕರನ್ನು ಜಿಲ್ಲಾ ಮಟ್ಟದಲ್ಲೇ ಕರೆದುಕೊಳ್ಳಲಾಗುತ್ತಿದೆ.

ಹನೂರ್ ಮಂಜುನಾಥ್, ಭೈರತಿ ಸುರೇಶ್ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸಲು ಸಿದ್ದರಾಮಯ್ಯ ತೆರೆಮರೆಯ ಕಾರ್ಯತಂತ್ರವನ್ನು ರೂಪಿಸಿದ್ದಾರೆಯೇ ಎಂಬ ಅನುಮಾನ ಹುಟ್ಟುಹಾಕಿದೆ. ಜೆಡಿಎಸ್‍ನ ಶಾಸಕರು ರಾಜಕೀಯ ಆಗುಹೋಗುಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮತ್ತೊಂದೆಡೆ ಬಿಜೆಪಿಯ ಶಶಿಕಲಾ ಜೊಲ್ಲೆ ಡಿ.ಕೆ.ಶಿ.ಅವರನ್ನು ಭೇಟಿ ಮಾಡಿದ್ದಾರೆ.ಕಾಂಗ್ರೆಸಿಗರು ಹಾಲಿ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಬದಲಾಗಿ ಮಾಜಿ ಶಾಸಕರು, ಪ್ರಭಾವಿ ಮುಖಂಡರನ್ನು ಕೇಂದ್ರೀಕರಿಸಿದ್ದಾರೆ.

ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಜೆಡಿಎಸ್‍ನಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅತೃಪ್ತ ಪ್ರಮುಖ ನಾಯಕರು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. ಈಗಾಗಲೇ ನಾಯಕರುಗಳು ಹಂತ ಹಂತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಕೆಲವು ಪ್ರಭಾವಿ ನಾಯಕರುಗಳನ್ನು ವರಿಷ್ಠ ನಾಯಕರು ಕೆಪಿಸಿಸಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಸಿಕೊಂಡರೆ ಕೆಳ ಹಂತದ ನಾಯಕರನ್ನು ಜಿಲ್ಲಾ ಮಟ್ಟದಲ್ಲೇ ಕರೆದುಕೊಳ್ಳಲಾಗುತ್ತಿದೆ.