ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಕಾರ್ಯಾಚರಣೆಯನ್ನು ವ್ಯಾಪಕಗೊಳಿಸಿರುವ ಮಂಗಳೂರು ಪೊಲೀಸರು, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ 2 ಪ್ರಕರಣಗಳನ್ನು ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ತೆಂಕ ಎಡಪದವು ಗ್ರಾಮದ ಬೋರುಗಡ್ಡೆ ನಿವಾಸಿ ಜಯಂತ ಪೂಜಾರಿ, ಮಡಪ್ಪಾಡಿ ನಿವಾಸಿ ದೇವದಾಸ ಪೂಜಾರಿ,ಕುಂದೋಡಿ ನಿವಾಸಿ ರಮೇಶ್ ಪೂಜಾರಿ, ಎಡಪದವು ಮದಪ್ಪಾಡಿ ನಿವಾಸಿ ಪ್ರವೀಣ್ ಬಂಧಿತ ಆರೋಪಿಗಳು. ಇರುವೈಲು ನಿವಾಸಿ ಧನು ಎಂಬಾತ ಪರಾರಿಯಾಗಿದ್ದಾನೆ. ಬಂಧಿತರಿಂದ 3 ಮೊಬೈಲ್ ಫೋನ್ ಹಾಗೂ 4,500 ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿಗಳು ತೆಂಕ ಎಡಪದವು ಮಡಪ್ಪಾಡಿ ಎಂಬಲ್ಲಿ ಆನ್ ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತವಾಗಿರುವ ಕುರಿತು ಖಚಿತ ಮಾಹಿತಿ ಆಧರಿಸಿ ಬಜ್ಪೆ ಪೊಲೀಸರು ಕಾರ್ಯಾಚರಣೆ ನಡೆಸಿರುತ್ತಾರೆ.
ಗಂಜಿಮಠ ಗಾಂಧಿನಗರ ಎಂಬಲ್ಲಿ ಆನ್ ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ತೆಂಕ ಎಡಪದವು ಮದಪ್ಪಾಡಿ ನಿವಾಸಿ ಪ್ರವೀಣ್ ಬಂಧಿತ ಆರೋಪಿ. ಇರುವೈಲು ನಿವಾಸಿ ಧನು ಎಂಬಾತ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತನಿಂದ ಬೆಟ್ಟಿಂಗ್ ಗೆ ಬಳಸಿದ್ದ ಒಂದು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.