ರಾಜ್ಯದೆಲ್ಲೆಡೆ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವರು

ರಾಜ್ಯ

ರಾಜ್ಯದಾದ್ಯಂತ ಪಟಾಕಿ ಸಂಪೂರ್ಣ ನಿಷೇಧ ಮಾಡಲು ಚಿಂತನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಮಾತ್ರ ಮಾಡಬೇಕಾ ಅಥವಾ ರಾಜ್ಯಾದ್ಯಂತ ಮಾಡಬೇಕಾ ಅನ್ನುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಅತ್ತಿಬೆಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಪಟಾಕಿ ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಬಳಿಕ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪುರಸಭೆ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿ, ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲಿ ಮಾತ್ರ ಪಟಾಕಿ ನಿಷೇಧ ಮಾಡಿದರೆ ಇದು ಎಷ್ಟು ಯಶಸ್ಸು ಕಾಣಲಿದೆ ಎನ್ನುವ ಕುರಿತು ಮಾಹಿತಿ ಪಡೆಯಲಾಗುವುದು ಎಂದರು.