ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅವಕಾಶ

ರಾಜ್ಯ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ನಿಗಮ ಮಂಡಳಿಗಳ ಹುದ್ದೆಗಳ ಭರ್ತಿ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಬರಬಹುದು ಎಂದಿದೆ. ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶ ನೀಡಿರುವ ಕೆಇಎ ಕೆಲವು ಷರತ್ತು ಹಾಕಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಗಲಾಟೆ ತಪ್ಪಿಸಲು ಈ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ತಿಳಿಸಿದೆ.

ರಾಜ್ಯದಲ್ಲಿ ಕಳೆದ ವರ್ಷ ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವ ವಿಚಾರ ಕೋಮು ಸಂಘರ್ಷಕ್ಕೆ ಕಾರಣವಾಗಿ ರಾಜ್ಯಾದ್ಯಂತ ಗಲಭೆಗೆ ಕಾರಣವಾಗಿತ್ತು. ಇದೀಗ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆ ಹಿಂದೂಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶ ನೀಡಿರುವ ಕೆಇಎ ಕೆಲವು ಷರತ್ತು ಹಾಕಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಅಂತಾ ತಿಳಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಗಲಾಟೆ ತಪ್ಪಿಸಲು ಈ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿಯಾದ ರಮ್ಯಾ ತಿಳಿಸಿದ್ದಾರೆ.

ಇದೇ ತಿಂಗಳು ಅಕ್ಟೋಬರ್ 28 ಮತ್ತು ಅಕ್ಟೋಬರ್ 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.