ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ; ಎಡಪದವು ನಿವಾಸಿ ಉದಯ ಕುಮಾರ್ ಬಂಧನ

ಕರಾವಳಿ

ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ 40ರ ಹರೆಯದ ಎಡಪದವು ನಿವಾಸಿ ಉದಯ ಕುಮಾರ್ ಲೈಂಗಿಕ ಕಿರುಕುಳ ನೀಡಿದ ಘಟನೆ ಶನಿವಾರ ನಡೆದಿದ್ದು, ಆರೋಪಿಯನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಣಿಯಿಂದ ಪುತ್ತೂರು ಕಡೆಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೋಗುತ್ತಿದ್ದ ಬಾಲಕಿಗೆ ಉದಯ ಕುಮಾರ್ ಎಡಪದವು ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಲಾಗಿದೆ. ಈ ವಿಚಾರವನ್ನು ಆಕೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದ ಹಿನ್ನಲೆಯಲ್ಲಿ ಪ್ರಯಾಣಿಕರು ಆತನನ್ನು ಮಾರ್ಗ ಮಧ್ಯೆ ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್ಸನ್ನು ನೇರವಾಗಿ ಪುತ್ತೂರು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ಬಸ್ಸಿನಿಂದಲೇ ವಶಕ್ಕೆ ಪಡೆದುಕೊಂಡರೆಂದು ತಿಳಿದು ಬಂದಿದೆ.