ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ನಿಧನ

ಕರಾವಳಿ

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ ದೈವಾಧೀನರಾಗಿದ್ದಾರೆ.

ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಇವತ್ತು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಆನಂದ ಆಳ್ವರವರು ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಪ್ರಗತಿಪರ ಕೃಷಿಕರಾಗಿದ್ದರು. 1979 ರಿಂದ 1989 ರವರೆಗೆ ತಮ್ಮ ವಿಶಾಲವಾದ ಭತ್ತದ ಗದ್ದೆಯಲ್ಲಿ ಕಂಬಳವನ್ನು ಪ್ರವೇಶ ಟಿಕೆಟ್‌ಗಳೊಂದಿಗೆ ಆಯೋಜಿಸಿದ್ದ ಕೀರ್ತಿ ಕೂಡ ಆನಂದ ಆಳ್ವರಿಗೆ ಸಲ್ಲುತ್ತಿದೆ.