ಬಿಜೈ ರಾಜನ ಕೊಲೆ ಪ್ರಕರಣ; ರವಿ ಪೂಜಾರಿಯನ್ನು ಖುಲಾಸೆಗೊಳಿಸಿದ ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಕರಾವಳಿ

ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ವಿರುದ್ದ ಧಾಖಲಾಗಿದ್ದ
ಬಿಜೈ ರಾಜನ ಕೊಲೆ ಪ್ರಕರಣದಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ
ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

2021 ರಲ್ಲಿ ನಗರದ ಫಳ್ನೀರ್ ವೆಸ್ಟ್ ಗೇಟ್ ಟವರ್ಸ್ ಕಟ್ಟಡದಲ್ಲಿರುವ
ನ್ಯಾಷನಲ್ ಮೆಡಿಕಲ್, ಕಾಯಿನ್ ಬೂತ್ ನ ಬಳಿ ರವಿಪೂಜಾರಿಯು
ಒಳಸಂಚು ನಡೆಸಿ ರವಿಪೂಜಾರಿಯ ಸಹಚರರು ಶೈಲೇಶ್ ರಾಜ @ ಬಿಜೈ ರಾಜನನ್ನು ತಲವಾರಿನಿಂದ ಕಡಿದು
ಗಂಭೀರವಾಗಿ ಗಾಯಗೊಳಿಸಿ ಕೊಲೆ ಮಾಡಿಸಿದ ರವಿ ಪೂಜಾರಿ ಮತ್ತು ಅತನ ಸಹಚರರ ವಿರುದ್ದ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿತ್ತು.ಸದ್ರಿ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ರವಿ ಪೂಜಾರಿ ಮತ್ತು ಅತನ ಸಹಚರರ ವಿರುದ್ದ ದೋಷರೋಪಣಾ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಘಟನೆ ನಡೆದ ಸಮಯ
ರವಿಪೂಜಾರಿ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದು, ತದ ನಂತರ 2021 ನೇ ಇಸವಿಯಲ್ಲಿ ರವಿಪೂಜಾರಿಯನ್ನು ಸೆನೆಗಲ್‌ನಲ್ಲಿ ಬಂಧಿಸಿ, ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ರವಿ ಪೂಜಾರಿ ವಿರುದ್ಧ ದಾಖಲಾದ
ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪಣಾ
ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ರವಿಪೂಜಾರಿ ವಿರುದ್ದ ದಾಖಲಾದ ಎರಡು ಪ್ರಕರಣಗಳಲ್ಲಿ ಮಾನ್ಯ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಮತ್ತೊಂದು ಪ್ರಕರಣದಲ್ಲಿ ಜೆ.ಎಂ.ಎಫ಼್.ಸಿ. ನ್ಯಾಯಾಲಯ ಮಂಗಳೂರು, ಸೇರಿ ಒಟ್ಟು 4 ಪ್ರಕರಣಗಳಲ್ಲಿ ರವಿಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಲಾಗಿದೆ. ಬಿಜೈ ರಾಜಾ ಕೊಲೆ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ ಗೌರವಾನ್ವಿತ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಯವರು
ರವಿ ಪೂಜಾರಿಯನ್ನು ಖುಲಾಸೆ ಗೊಳಿಸಿ ತೀರ್ಪು ನೀಡಿರುತ್ತಾರೆ.

ರವಿಪೂಜಾರಿಯ ವಿರುದ್ದ ಇನ್ನೂ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿಪೂಜಾರಿ ಪರವಾಗಿ ಮಂಗಳೂರಿನ ನ್ಯಾಯವಾದಿಗಳಾದ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.