ರಾಜ್ಯ ಬಿಜೆಪಿಗೆ ನೂತನ ಸಾರಥಿ ಕೊನೆಗೂ ಸಿಕ್ಕಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ನೇಮಕವಾಗಿದ್ದಾರೆ. ಈ ಮೂಲಕ ಲಿಂಗಾಯತ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ. ಬಿಜೆಪಿಯಲ್ಲಿ ಮತ್ತೆ ಮಾಜಿ ಸಿಎಂ ಯಡಿಯೂರಪ್ಪ ಅಧಿಪತ್ಯ ಸಾಧಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ಸದ್ಯ ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಕರ್ನಾಟಕ ಬಿಜೆಪಿಯ ಅಧ್ಯಕ್ಷರಾಗುವುದು ಬಹುತೇಕ ಪಕ್ಕಾ ಎಂದೂ ಈ ಹಿಂದೆ ಹೇಳಲಾಗುತ್ತಿತ್ತು. ಆದರೆ ಇದೀಗ ಬಿ.ವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.