ಎ.ಜೆ ಲೇಡಿಸ್ ಹಾಸ್ಟೇಲಿನ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಕರಾವಳಿ

ಕಾಲೇಜು ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ನಗರದ ಎ.ಜೆ. ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡುತ್ತಿರುವ ಪ್ರಕೃತಿ ಶೆಟ್ಟಿ ಇಂದು ಮುಂಜಾನೆ ಎ.ಜೆ. ಲೇಡಿಸ್ ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರ ಮೂಲಗಳಿಂದ ತಿಳಿದು ಬಂದಿದೆ.