ಮುಸ್ಲಿಂ ಸೆಂಟ್ರಲ್ ಕಮಿಟಿ ಉಪಾಧ್ಯಕ್ಷರಾದ ಭಾಷಾ ತಂಙಳ್ ವಿಧಿವಶ

ಕರಾವಳಿ

ಮಂಗಳೂರು ಬಂದರ್ ನಿವಾಸಿಯಾಗಿರುವ ಮಂಗಳೂರು ಸೆಂಟ್ರಲ್ ಕಮಿಟಿ ಉಪಾಧ್ಯಕ್ಷರಾದ ಸೈಯ್ಯದ್ ಭಾಷಾ ತಂಞಳ್ ಇಂದು ಸಂಜೆ ವಿಧಿವಶರಾಗಿದ್ದಾರೆ. ಬಂದರ್ ಕೇಂದ್ರ ಮಸೀದಿಯಲ್ಲಿ ಹಲವು ವರ್ಷಗಳಿಂದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಜನಾನುರಾಯಿಯಾಗಿ ಗುರುತಿಸಿಕೊಂಡಿದ್ದರು. ಹಲವಾರು ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ಮುಂಚೂಣಿಯಾಗಿ, ಮುಸ್ಲಿಂ ಲೀಗ್ ಪಕ್ಷದಲ್ಲೂ ಗುರುತಿಸಿಕೊಂಡಿದ್ದರು.