ನೇಜಾರು ಕೊಲೆ ಪ್ರಕರಣ: ಬೆಳಗಾವಿಯ ಕುಡುಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ ಬಂಧನ; ಈತ ಮಂಗಳೂರು ಏರ್ ಪೋರ್ಟ್ ಸೆಕ್ಯೂರಿಟಿ

ಕರಾವಳಿ

ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ಕುಡುಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.
ಈತ ಮಂಗಳೂರು ಏರ್ ಏರ್ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಸಿಆರ್‌ ಪಿಎಫ್‌ ಸಿಬ್ಬಂದಿ ಎನ್ನಲಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ.

ಕುಡಚಿಯಲ್ಲಿ ನೀರಾವರಿ ಇಲಾಖೆಯ ಕೆಲಸ ಮಾಡುತ್ತಿದ್ದ ಆತನ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಉಡುಪಿ ಪೊಲೀಸರು ಈತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.