ಪೊಲೀಸರಿಗೆ ಗುಡ್ ನ್ಯೂಸ್; ಕನಿಷ್ಠ 7 ವರ್ಷ ಸೇವೆ ಪೂರ್ಣಗೊಳಿಸಿದ ಪತಿ-ಪತ್ನಿ ಸ್ವಂತ ಕೋರಿಕೆ ಮೇರೆಗೆ ವರ್ಗಾವಣೆಗೆ ಅನುಮತಿ

ರಾಜ್ಯ

ಪತಿ-ಪತ್ನಿ ಪ್ರಕರಣದಲ್ಲಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸ್ ಸಿಬ್ಬಂದಿಗೆ ಅಂತರ ಜಿಲ್ಲಾ ವರ್ಗಾವಣೆ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಪತಿ -ಪತ್ನಿ ಪ್ರಕರಣದಲ್ಲಿ ಅಂತರಜಿಲ್ಲಾ ವರ್ಗಾವಣೆ ಸಿಗದೇ ಪರದಾಟ ನಡೆಸಿದ್ದ ಪೊಲೀಸ್ ಸಿಬ್ಬಂದಿ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಕ್ರಮ ಕೈಗೊಂಡಿದೆ. ಸಿ ಮತ್ತು ಡಿ ವೃಂದದ ನೌಕರರಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಿ 2022ರ ನವೆಂಬರ್ ನಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಕನಿಷ್ಠ 7 ವರ್ಷ ಸೇವೆ ಪೂರ್ಣಗೊಳಿಸಿದ ಪತಿ-ಪತ್ನಿ ಪ್ರಕರಣದಲ್ಲಿ ಸ್ವಂತ ಕೋರಿಕೆ ಮೇರೆಗೆ ವರ್ಗಾವಣೆಗೆ ಅನುಮತಿ ನೀಡಲಾಗಿತ್ತು. ಇದಾಗಿ ಒಂದು ವರ್ಷ ಕಳೆದರೂ ಪೊಲೀಸರಿಗೆ ವರ್ಗಾವಣೆ ಅವಕಾಶ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಪತಿ, ಪತ್ನಿ ಪ್ರಕರಣದಲ್ಲಿ ವರ್ಗಾವಣೆ ಆದೇಶ ಹೊರಡಿಸಿಸಲು ಗೃಹ ಸಚಿವರು ನಿರ್ದೇಶನ ನೀಡಿದ್ದಾರೆ.