ಚಿಕ್ಕಮಗಳೂರಿನ ವಕೀಲರಾದ ಪ್ರೀತಮ್ ಮೇಲೆ ಸಂಚಾರ ನಿಮಯ ಉಲ್ಲಂಘನೆಯ ಕ್ಷುಲ್ಲಕ ಕಾರಣಕ್ಕಾಗಿ ಪೋಲೀಸರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು ಈ ಘಟನೆಯನ್ನು ಅಖಿಲ ಭಾರತ ವಕೀಲರ ಒಕ್ಕೂಟ ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಅಲ್ಲದೆ ತಪ್ಪಿತಸ್ಥ ಪೊಲೀಸರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದೆ.
ರಾಜ್ಯಾಧ್ಯಂತ ವಕೀಲರ ಮೇಲಿನ ದೌರ್ಜನ್ಯ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದೂ ವಕೀಲ ಸಮುದಾಯಕ್ಕೆ ರಕ್ಷಣೆ ಒದಗಿಸಲು ಆಳುವ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೂಡಲೇ ರಾಜ್ಯ ಸರ್ಕಾರ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟದ ಅಧ್ಯಕ್ಷರಾದ ಯಶವಂತ ಮರೋಳಿ ಹಾಗೂ ಕಾರ್ಯದರ್ಶಿ ನಿತಿನ್ ಕುತ್ತಾರ್ ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.