ಕೋಟಿ ವಂಚಕಿ ಚೈತ್ರಾ ಳಿಗೆ ಜಾಮೀನು ಮಂಜೂರು

ರಾಜ್ಯ

ರಾಜ್ಯದಾದ್ಯಂತ ಭಾರೀ ಸುದ್ಧಿಗೆ ಕಾರಣವಾಗಿದ್ದ ಬಿಜೆಪಿ ಟಿಕೆಟ್ ದೋಖಾ ಪ್ರಕರಣದಲ್ಲಿ ಹೊಟೇಲ್‌ ಉದ್ಯಮಿ ಗೋವಿಂದಬಾಬು ಪೂಜಾರಿಗೆ 7 ಕೋಟಿ ರೂ. ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಸಹಿತ ಇಬ್ಬರಿಗೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, ಮಂಗಳವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಈ ಮೂಲಕ ಪ್ರಕರಣದಲ್ಲಿ ಮೂವರಿಗೆ ಜಾಮೀನು ಸಿಕ್ಕಂತಾಗಿದೆ. ಈ ಹಿಂದೆ ಹೊಸಕೋಟೆಯ ಹಾಲಶ್ರೀ ಸ್ವಾಮೀಜಿಗೆ ಜಾಮೀನು ಸಿಕ್ಕಿತ್ತು.