ರೆಸ್ಟೋರೆಂಟಿನಲ್ಲಿ ವೇಶ್ಯಾವಟಿಕೆ; 12 ಮಂದಿ ಬಾಲಕಿಯರೊಂದಿಗೆ 18 ಮಂದಿ ಬಾಲಕರ ಬಂಧನ

ರಾಷ್ಟ್ರೀಯ

ರೆಸ್ಟೋರೆಂಟ್ ಒಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಮಂದಿ ಬಾಲಕಿಯರೊಂದಿಗೆ 18 ಮಂದಿ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. DYSP ನೇತೃತ್ವದಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಿ ಇವರನ್ನು ಬಂದಿಸಲಾಗಿದೆ. ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು ಆರ್ರಾ ಜಿಲ್ಲೆಯಲ್ಲಿರುವ ಹೋಟೆಲ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಯುವತಿಯರು ಸೇರಿದಂತೆ 30 ಜನರನ್ನು ಬಂಧಿಸಿದ್ದಾರೆ.

ಹೋಟೆಲ್‌ ಮಾಲೀಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳೀಯರು ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.