ಹೊಟೇಲ್ ಒಂದರಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಮೇಲೆ 4 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಪ್ರಕರಣ ಸಂಬಂಧ ಹೋಟೆಲ್ ಮಾಲೀಕ ಹಾಗೂ ಆತನ ಸಂಬಂಧಿಯನ್ನು ಬಂಧಿಸಲಾಗಿದೆ. ಸ್ಥಳೀಯಾಡಳಿತ ಹೋಟೆಲ್‌ಗೆ ಬೀಗ ಜಡಿದಿದೆ.
’15 ವರ್ಷದ ಬಾಲಕಿಯೊಬ್ಬಳು ಬುಧವಾರ ಕಾಣೆಯಾಗಿದ್ದಳು. ಬಳಿಕ ಆಕೆ ಪಕ್ಕದ ಹೋಟೆಲ್ ಒಂದರ ಕೋಣೆಯಲ್ಲಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಪ್ರಲೋಭಿಸಿ ಹೋಟೆಲ್ ಕೊಠಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಸಂಬಂಧಿಕರು ನೀಡಿದ ದೂರಿನನ್ವಯ ಪೊಲೀಸರು, ಹೋಟೆಲ್ ಮಾಲೀಕ ವೇದ ಪ್ರಕಾಶ ವರ್ಮಾ, ಆತನ ಸಂಬಂಧಿಕ ನೀರಜ್ ಶರ್ಮಾ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳ ಮೇಲೆ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿಗಳ ಪತ್ತೆ ಕಾರ್ಯಾಚರಣೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.