ಗಂಜಿಮಠ: ಮಳಲಿ, ಸಾದೂರು ಅನಧಿಕೃತ ಮರಳು ಅಡ್ಡೆಗೆ ದಾಳಿ; ಎರಡು ಟಿಪ್ಪರ್, ಮೂರು ದೋಣಿ ವಶ.!

ಕರಾವಳಿ

ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ಸಾದೂರು ಬಳಿ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗೆ ಇಂದು ಮಧ್ಯಾಹ್ನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಆತನ ಪಟಾಲಂಗಳು ಸೇರಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದು, ಪ್ರತಿನಿತ್ಯ ಅಂದಾಜು 50 ಕ್ಕೂ ಅಧಿಕ ಲೋಡ್ ಮರಳು ಅಕ್ರಮವಾಗಿ ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ವರ್ತಮಾನ ಪಡೆದ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ಎರಡು ಲಾರಿ ಹಾಗೂ ಮೂರು ದೋಣಿಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಪಂಚಾಯತ್ ಸದಸ್ಯರೊಬ್ಬರು ಈ ಅಕ್ರಮದಲ್ಲಿ ಶಾಮೀಲಾಗಿರುವುದು ಎಂದು ತಿಳಿದುಬಂದಿದೆ.