ಮಂಗಳೂರು: ಬೀದಿಬದಿ ವ್ಯಾಪಾರಸ್ಥರ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾವಲಂಬಿ ಜೀವನಕ್ಕಾಗಿ ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಇದು ರಾಜ್ಯದ ಮೊದಲ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಆಗಿದ್ದು ಇದರ ಉದ್ಘಾಟನೆ ತಾ/10/01/2024 ರಂದು ನಗರದ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಪದ್ಮಶ್ರೀ ಹಾಜಬ್ಬ ಹರೇಕಳ ಉದ್ಘಾಟನೆ ಮಾಡಲಿದ್ದಾರೆ.
ಸಿಐಟಿಯು ಜಿಲ್ಲಾಧ್ಯಕ್ಷರಾದ ಜೆ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಅಪರ ಜಿಲ್ಲಾಧಿಕಾರಿ ಡಾ ಜಿ ಸಂತೋಷ್ ಕುಮಾರ್ ಷೇರು ಪ್ರಮಾಣ ಪತ್ರ ಬಿಡುಗಡೆ ಮಾಡಲಿದ್ದಾರೆ. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಸ್ಥಿರ ಠೇವಣಿದಾರರಿಗೆ ಪ್ರಮಾಣ ಪತ್ರ, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಹೆಚ್ ಎನ್ ರಮೇಶ್ ಅವರು ಚುನಾಯಿತ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಿಸಲಿದ್ದಾರೆ. ನಗರ ಪಾಲಿಕೆ ಆಯುಕ್ತರಾದ ಆನಂದ ಸಿ. ಎಲ್, ಪಾಲಿಕೆಯ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಕಾರ್ಮಿಕ ನಾಯಕ ಸುನಿಲ್ ಕುಮಾರ್ ಬಜಾಲ್, ಡಾ ರೀಟಾ ನೋರೋನ್ಹ, ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ, ಸಂತೋಷ್ ಬಜಾಲ್, ಬಿ ಎಂ ಮಾಧವ, ಮಂಜುಳಾ ನಾಯಕ್, ಬಾವ ಪದರಂಗಿ, ಮೊಹಮ್ಮದ್ ಫೈರೋಜ್ ವಕೀಲರಾದ ಚರಣ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಮಾರಿ ಶ್ರೇಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.