ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಪ್ರಸಕ್ತ ವರ್ಷದಿಂದ ಪಠ್ಯಪುಸ್ತಕಗಳು ಭಾಗ-1 ಮತ್ತು ಭಾಗ-2 ಎಂದು ಎರಡು ವಿಭಾಗಗಳಾಗಿ ಮುದ್ರಿಸಿ ಸರಬರಾಜು ಮಾಡಲು ಇಲಾಖೆ ತೀರ್ಮಾನ ಮಾಡಿದೆ. ಅರ್ಧವಾರ್ಷಿಕ ಪರೀಕ್ಷೆ ವರೆಗೆ ಭಾಗ-1 ಹಾಗೂ ದಸರಾ ರಜೆ ಮುಗಿದ ಬಳಿಕ ಭಾಗ-2 ಪಠ್ಯಪುಸ್ತಕಗಳನ್ನು ವಿತರಣೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.
ಪಠ್ಯಪುಸ್ತಕ ವಿಭಜಿಸಿ ನೀಡುವುದರಿಂದ ಮಕ್ಕಳ ಶಾಲಾ ಬ್ಯಾಗ್ ತೂಕ ಕಡಿಮೆಯಾಗಲಿದೆ. ನಿರ್ವಹಣೆ ಸುಲಭವಾಗುತ್ತದೆ. ಮಕ್ಕಳ ಒತ್ತಡ ಇಳಿಕೆಯಾಗುತ್ತದೆ. ಈ ನಿಟ್ಟಿನಲ್ಲಿ ನೂತನ ಯೋಜನೆ ಜಾರಿಗೊಳಿಸಲಿದ್ದು, ಪುಸ್ತಕಗಳ ಮುದ್ರಣ ವೆಚ್ಚ ಅಂದಾಜು 10 ಕೋಟಿ ರೂಪಾಯಿಯಷ್ಟು ಹೆಚ್ಚಾಗಬಹುದು ಎಂದು ಹೇಳಲಾಗಿದೆ.