ಬಜಪೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಾಂಜಾ ಸೇವನೆ, ನಾಲ್ಕು ಮಂದಿ ವಿರುದ್ದ ಪ್ರಕರಣ ದಾಖಲು

ಕರಾವಳಿ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಜಪೆ, ಮರವೂರು, ಶಾಂತಿಗುಡ್ಡೆ ಮತ್ತು ಇತರ ಕಡೆಗಳಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಕೃಷ ಮುರಳಿ, ವಿವೇಕ್ ಸಹನಿ, ರಾಹುಲ್ ಗುಪ್ತ ಮತ್ತು ಆರ್ಯನ್ ಶರ್ಮ ಎಂಬವರನ್ನು ಒಟ್ಟು ನಾಲ್ಕು ಜನರನ್ನು ಬಜಪೆ ಪೊಲೀಸ್ ಠಾಣೆಯ ಪಿಎಸ್ಐ ರವರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಈ ನಾಲ್ಕು ಮಂದಿಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.