ರಾಜ್ಯದಲ್ಲಿ ಬಿಜೆಪಿಗೆ ಬಿಗ್ ಶಾಕ್ ನೀಡಲಿರುವ ಇಬ್ಬರು ಶಾಸಕರು; ಕಾಂಗ್ರೆಸ್ ಸೇರ್ಪಡೆಗೆ ರೆಡಿ.!

ರಾಜ್ಯ

ಲೋಕಸಭಾ ಚುನಾವಣೆ ವೇಳೆ ರಾಜ್ಯ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದ್ದು, ಪಕ್ಷಕ್ಕೆ ಸೇರಲು ಎಲ್ಲಾ ತಯಾರಿ ರೆಡಿ ಆಗಿದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಬಳಿಕ ಕಾಂಗ್ರೆಸ್ ಪರ ಅಲೆ ಜೋರಾಗಿದೆ ಎನ್ನುವ ಲೆಕ್ಕಾಚಾರದೊಂದಿಗೆ ಇಬ್ಬರು ಬಿಜೆಪಿಯ ಪ್ರಮುಖ ಶಾಸಕರು ಕಾಂಗ್ರೆಸ್‌ಗೆ ವಾಪಸ್ ಮರಳಲು ಪ್ಲಾನ್ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅವರಿಬ್ಬರ ಮನವೊಲಿಸಲು ಪ್ರಯತ್ನಿಸಿದ್ದು, ಅದು ಏನೂ ಪ್ರಯೋಜನ ನೀಡಿಲ್ಲ ಎಂದು ತಿಳಿದುಬಂದಿದೆ.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ದಿನಾಂಕ ನಿಗದಿ ಮಾಡಿದ್ದಾರೆ ಎನ್ನಲಾಗಿದ್ದು, ಸದ್ಯದಲ್ಲೇ ರಾಜ್ಯ ರಾಜಕೀಯದಲ್ಲಿ ಭಾರಿ ಬೆಳವಣಿಗೆ ನಡೆಯಲಿದೆ.