ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಕರಾವಳಿ

ಬಜಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಜೋಕಟ್ಟೆ ತೋಕೂರು ನಿವಾಸಿ ಇಮ್ರಾನ್ ಹಾಗೂ 2021 ನೇ ಇಸವಿಯಲ್ಲಿ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತ ನಡೆಸಿ, ಗಾಯಾಳು ಮೃತ ಪಡಲು ಕಾರಣಕರ್ತನಾದ ಅಪರಾಧಿಕ ಮಾನವ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ, ವಾಸ ಸ್ಥಳವನ್ನು ಬದಲಿಸಿ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಗೋರಕಪುರ ನಿವಾಸಿ ಧರ್ಮವೀರ ಎಂಬವರನ್ನು ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೀಪ ಜಿ.ಎಸ್ ರವರ ತಂಡ, ಈ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿರುತ್ತದೆ.

ಇಮ್ರಾನ್ ಎಂಬಾತನ ವಿರುದ್ದ ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದನ ಕಳವಿಗೆ ಸಂಬಂಧಿಸಿದ ಕೇಸುಗಳು ದಾಖಲಾಗಿರುತ್ತವೆ.

ಆರೋಪಿತರ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ರವರ ಮಾರ್ಗದರ್ಶನದಲ್ಲಿ DCP ಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ಮತ್ತು ಬಜಪೆ ಪೊಲೀಸ್ ಠಾಣೆಯ ನಿರೀಕ್ಷಕರಾದ ಸಂದೀಪ್ ಜಿ.ಎಸ್ ರವರ ನೇತೃತ್ವದಲ್ಲಿ PSI ಗುರು ಕಾಂತಿ, PSI ರೇವಣಸಿದ್ದಪ್ಪ, PSI ರವಿ N.N ಮತ್ತು ಶ್ರೀಮತಿ ಶೋಬಾ ಹಾಗು ASI ರಾಮ ಪೂಜಾರಿ, ಜಗದೀಶ್ ಪುತ್ತೂರು, ರೋಹಿತ ಹಳೆಯಂಗಡಿ, ರಶೀದ್ ಶೇಖ , ಸುಜನ್ ಮತ್ತು ಬಸವರಾಜ್ ಪಾಟೀಲ್ ರವರು ಭಾಗವಹಿಸಿದ್ದರು.