ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು: ಸುಬ್ರಹ್ಮಣ್ಯ ಸ್ವಾಮಿ

ರಾಷ್ಟ್ರೀಯ

ಖಡಕ್ ಮಾತುಗಳ ಮೂಲಕ ವಿರೋಧ ಪಕ್ಷಗಳನ್ನು,ಸ್ವ ಪಕ್ಷದವರನ್ನು ಬಾಯಿ ಮುಚ್ಚಿಸುವ ಬಿಜೆಪಿ ನಾಯಕರಲ್ಲಿ ಪಕ್ಷದ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಮುಖರು. ವಿರೋಧ ಪಕ್ಷಗಳ ಜೊತೆಗೆ ತಮ್ಮ ಪಕ್ಷದ ತಪ್ಪುಗಳನ್ನು ಕೂಡ ಕಟುವಾಗಿಯೇ ಟೀಕಿಸುವ ಸ್ವಾಮಿ, ಬಿಜೆಪಿಗರಿಗೂ ಕೂಡ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ. ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮ್ಯಾಜಿಕ್ ನಂಥದ್ದೇನೂ ಇಲ್ಲ ಎಂದು ಟೀಕಿಸಿದ್ದ ಬಿಜೆಪಿ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಟ್ವಿಟ್ಟರ್ ನಲ್ಲಿ ಪ್ರಜ್ಞಾಸಿಂಗ್ ಠಾಕೂರ್ ಗೆ ಮತ್ತೆ ಭೋಪಾಲ್‌ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್​ಎಸ್​ಎಸ್​ ಅನ್ನು ಟೀಕಿಸಿದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ, ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು ಎಂದಿದ್ದಾರೆ.