2024ರ ಲೋಕಸಭಾ ಚುನಾವಣೆ ರಾಜ್ಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಫೈನಲ್ ಆಗ್ತಾರೆ ಎಂಬ ಕುತೂಹಲ ಮೂರು ಪಕ್ಷದಲ್ಲೂ ಮನೆ ಮಾಡಿದೆ. ಅದರಲ್ಲೂ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿಗೆ ಟಿಕೆಟ್ ತಪ್ಪಬಹುದು ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಪಟ್ಟಿಯಲ್ಲಿ ಉಡುಪಿಯ ಹಾಲಿ ಸಂಸದೆ ಶೋಭಾ ಕರಂದ್ಲಾಜೆಯವರ ಹೆಸರು ಕೂಡ ವ್ಯಾಪಕವಾಗಿ ಕೇಳಿಬರುತ್ತಿತದೆ. ಕಾರಣ ಕಾರ್ಯಕರ್ತರ ವಿರೋಧ. ಈ ಬಾರಿ ಉಡುಪಿ-ಚಿಕ್ಕಮಂಗಳೂರು ಕ್ಷೇತ್ರದಿಂದ ಯಾವುದೇ ಕಾರಣಕ್ಕೂ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಈ ಮುಂಚೆಯೇ ಶೋಭಾ ಗೋ ಬ್ಯಾಕ್ ಅಭಿಯಾನ ಆರಂಭಿಸಿದ್ದ ಕಾರ್ಯಕರ್ತರು ಈಗ ಅದನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಸಂಸದಯಾಗಿ ಕಳೆದ 5 ವರ್ಷದಲ್ಲಿ ಬೆರಳೆಣಿಕೆಯಷ್ಟು ಬಾರಿ ಮಾತ್ರ ಕ್ಷೇತ್ರಕ್ಕೆ ಬಂದಿದ್ದಾರೆ. ಜನರು ಮತ್ತು ಕಾರ್ಯಕರ್ತರೊಂದಿಗೆ ಸಂಪರ್ಕ ಇಟ್ಟು ಕೊಂಡಿಲ್ಲ. ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕೆಲಸವೂ ನಡೆಸಿಲ್ಲ . ನಮಗೆ ಮೋದಿ ಬೇಕು ಆದ್ರೆ ಶೋಭಾ ಬೇಡ ಎಂಬ ಅಭಿಯಾನ ನಡೆಸುತ್ತಿದ್ದಾರೆ. ಸ್ವತಃ ಬಿಜೆಪಿ ಕಾರ್ಯಕರ್ತರೇ ವಿರೋಧಿಸುವುದರಿಂದ ಈ ಬಾರಿ ಶೋಭಾ ಕರಂದ್ಲಾಜೆಗೆ ಟಿಕೆಟ್ ಮಿಸ್ ಆಗೋದು ಖಚಿತ ಎಂದು ಬಿಜೆಪಿಯ ಉನ್ನತ ಮೂಲಗಳು ಅಂದಾಜಿಸಿವೆ.