ಕಾಂಗ್ರೆಸ್ ಗೆ ‘ಕೈ’ ಕೊಟ್ಟು ಬಿಜೆಪಿ ಸೇರಿದ ಶೆಟ್ಟರ್ ಸ್ಥಿತಿ ಅಧೋಗತಿ.. ಬಾಣಲೆಯಿಂದ ಬೆಂಕಿಗೆ.!

ರಾಜ್ಯ

ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಜಗದೀಶ್‌ ಶೆಟ್ಟರ್‌ ಅವರು ಸ್ಪರ್ಧಿಸುತ್ತಾರೆ ಎಂಬುದು ಇನ್ನೇನು ಖಚಿತಪಡಿಸುವಾಗಲೇ ಒಂದು ಟ್ವಿಸ್ಟ್‌ ಸಿಕ್ಕಿದೆ ಇದೀಗ ಬೆಳಗಾವಿಯ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್‌ ನೀಡುವಂತೆ ಒತ್ತಡ ಹಾಕಲಾಗುತ್ತಿದೆ.ಹಾವೇರಿ ಮತ್ತು ಧಾರವಾಡ ಕ್ಷೇತ್ರದಲ್ಲಿ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಬೆಳಗಾವಿಯಿಂದ ಸ್ಪರ್ಧಿಸುವ ಆಫರ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದರು. ಹಾಗೂ ಬೆಳಗಾವಿಯಲ್ಲೂ ಆಹ್ವಾನ ನೀಡಿದ್ದಾರೆ ಎಂದು ಹೇಳಿಕೊಂಡಿದ್ದರು ಆದರೆ ಈಗ ಕ್ಷಣದಲ್ಲಿ ಅವರ ಕೈಯಿಂದ ಟಿಕೇಟ್‌ ತಪ್ಪಿಹೋಗುವ ಸಾಧ್ಯತೆ ಇದೆ ಎಂಬ ವದಂತಿ ಕೇಳಿ ಬಂದಿದೆ. ಇದೀಗ ಅವರ ಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ.

ಈ ನಡುವೆ ಬೆಳಗಾವಿ ಟಿಕೆಟ್ ಪಡೆಯಲು ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ ಅಲ್ಲದೇ ಅವರಿಗೆ ಸಹಾಯಕನಾಗಿ ರಮೇಶ್ ಜಾರಕಿಹೊಳಿ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯಕ್ಕೆ ಈ ಎಲ್ಲಾದಕ್ಕೂ ಉತ್ತರ ಕಾಣಲು ನಾಳೆ ಬಿಡುಗಡೆ ಆಗುತ್ತಿರುವ ಬಿಜೆಪಿ 3ನೇ ಪಟ್ಟಿಯನ್ನು ಕಾಯಬೇಕಾಗಿದೆ.