ಮಡಂತ್ಯಾರು ಮಾಲಾಡಿ ಗ್ರಾಮದ, ವಿದ್ಯಾನಗರ ನಿವಾಸಿ, ಕಳೆದ ಆರು ವರ್ಷಗಳಿಂದ ಬಂಟ್ವಾಳ ತಾಲೂಕು ಅಮ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ಮಾ.27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಅವರು ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಮನೆಯವರು ಅಮ್ಮಾಡಿ ಪಂಚಾಯತ್ ನಲ್ಲಿ ವಿಚಾರಿಸಿದಾಗ, ಅಲ್ಲಿನ ಸಿಬ್ಬಂದಿಗಳು ಕಾಯ೯ದಶಿ೯ಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿದ್ದರು. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಲಿಲ್ಲ. ಲಕ್ಷ್ಮೀನಾರಾಯಣ ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುಮದಾಗಿ ಅವರ ಮನೆಯವರು ನೀಡಿದ ದೂತಿನಂತೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಮಾ.31 ರಂದು ನಾಪತ್ತೆಯಾಗಿ ನಾಲ್ಕು ದಿನಗಳ ಬಳಿಕ ಅವರ ಮೃತ ದೇಹ ಪಟ್ರಮೆ ಹೊಳೆಯಲ್ಲಿ ಇದೀಗ ಪತ್ತೆಯಾಗಿದೆ. ನಾಪತ್ತೆಯಾದ ಮರುದಿನ ಪಟ್ರಮೆ ಸೇತುವೆ ಬಳಿ ಅವರ ಬೈಕ್ ದೊರಕಿತ್ತು. ಬೈಕ್ ದೊರೆತ ಬಳಿಕ ಇಲ್ಲಿ ಅವರಿಗಾಗಿ ಹುಡುಕಾಟ ನಡೆಯುತ್ತಿತ್ತು ಇಂದು ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಇದೀಗ ಕೊಳೆತಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರ ಬೈಕ್ ಪತ್ತೆಯಾದ ಸ್ಥಳದ ಸಮೀಪವೇ ಮೃತದೇಹ ಪತ್ತೆಯಾಗಿದ್ದು ಇದರ ಆಧಾರದಲ್ಲಿ ಮೃತದೇಹ ನಾಪತ್ತೆ ಆಗಿರುವ ಲಕ್ಷ್ಮೀನಾರಾಯಣ ಅವರದೆಂದು ಗುರುತಿಸಲಾಗಿದೆ. ಲಕ್ಷ್ಮೀನಾರಾಯಣ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅನುಮಾನಿಸಲಾಗಿದೆ. ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಮೃತದೇಹವನ್ನು ಮೇಲೆತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.