ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಯೂ ಜಯ ಬಾರಿಸಲಿದ್ದು, ಬಿಜೆಪಿಯ ಸಾಧನೆ ಶೂನ್ಯ ಎಂದು ಸಮೀಕ್ಷೆಯಲ್ಲಿ ತಿಳಿಸಿಲಾಗಿದೆ. ಇದು ಬಿಜೆಪಿಗೆ ಬಿಗ್‌ ಶಾಕ್ ನೀಡಿದೆ

ರಾಷ್ಟ್ರೀಯ

ಲೋಕಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ, ತಮ್ಮ ಗೆಲುವಿನ ಹಾದಿಯನ್ನು ರಚಿಸಿದೆ. ತಮ್ಮ ಅಭ್ಯರ್ಥಿಗಳ ಪರವಾಗಿ ಅಬ್ಬರ ಪ್ರಚಾರವನ್ನು ಕೈಗೊಂಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಸಮೀಕ್ಷೆಗಳು ನಡೆಯುತ್ತಿದ್ದು, ಲೋಕ್‌ ಪೋಲ್‌ ತಮ್ಮ ಸಮೀಕ್ಷೆ ಫಲಿತಾಂಶ ಪ್ರಕಟಿಸಿದೆ. ರಾಜ್ಯದ ನೆರೆಯ ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಯೂ ಎಲ್ಲಾ ಸ್ಥಾನಗಳಲ್ಲಿ ಜಯ ಬಾರಿಸಲಿದ್ದು, ಬಿಜೆಪಿಯ ಸಾಧನೆ ಶೂನ್ಯ ಎಂದು ಸಮೀಕ್ಷೆಯಲ್ಲಿ ತಿಳಿಸಿಲಾಗಿದೆ. ಇದು ಬಿಜೆಪಿಗೆ ಬಿಗ್‌ ಶಾಕ್‌ ನೀಡಿದೆ.

ತಮಿಳುನಾಡಿನ ಎಲ್ಲಾ 39 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಮೈತ್ರಿಕೂಟದ ಇಂಡಿಯಾ ಬಣ ಜಯಗಳಿಸಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮಿಳುನಾಡಿನಿಂದ ಲೋಕಸಭಾ ಸ್ಥಾನವನ್ನು ಗೆಲ್ಲಲು ಬಿಜೆಪಿ ನೇತೃತ್ವದ ಎನ್‌ಡಿಎ ವಿಫಲವಾಗಿದೆ. ಈ ಬಾರಿ ಮತ್ತೆ ಪುಟಿದೇಳಬೇಕು ಎಂದಿದ್ದ ಬಿಜೆಪಿಗೆ ಸಮೀಕ್ಷೆಯಿಂದ ಮುಖಭಂಗವಾಗಿದೆ. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹಲವು ವಿಷಯಗಳಲ್ಲಿ ರಾಜ್ಯ ಸರ್ಕಾರವನ್ನು ದೂಷಿಸುತ್ತಾ ಜನರ ಗಮನ ಸೆಳೆಯಲು ಪ್ರಯತ್ನಿಸಿದ್ದು, ಅದು ಫಲ ನೀಡುವ ಲಕ್ಷಣ ಕಾಣುತ್ತಿಲ್ಲ. ಈ ಸಮೀಕ್ಷೆಯಿಂದಾಗಿ ಬಿಜೆಪಿಗೆ ಬಿಗ್‌ ಶಾಕ್‌ ಎದುರಾಗಿದೆ. ಬಿಜೆಪಿ ವಿರುದ್ಧ ರಾಜ್ಯದಲ್ಲಿ ವಿರೋಧಿ ಅಲೆ ಸೃಷ್ಟಿಯಾಗಿದ್ದು, ಕೆಲವು ಹಾಲಿ ಸಂಸದರು ಎದುರಿಸುತ್ತಿರುವ ಆಡಳಿತ ವಿರೋಧಿ ಸವಾಲುಗಳ ಹೊರತಾಗಿಯೂ ಬಿಜೆಪಿ ತಮಿಳುನಾಡಿನಲ್ಲಿ ಒಂದಕ್ಕಿ ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ಲೋಕ ಪೋಲ್ ತಿಳಿಸಿದೆ.

ಈ ಬಾರಿ ಬಿಜೆಪಿ ಕೊಯಮತ್ತೂರು ಮತ್ತು ಕನ್ಯಾಕುಮಾರಿ ಸೇರಿದಂತೆ ಕೆಲವು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿತ್ತು. ಕೆಲವು ಸಮೀಕ್ಷಗಳ ಪ್ರಕಾರ ಬಿಜೆಪಿ ಕೆಲವು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು.