ಭ್ರೂಣ ಹತ್ಯೆ ಪ್ರಕರಣ; ಅಧಿಕಾರಿಗಳ ದಾಳಿ: ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಂಪತಿಗಳ ಬಂಧನ

ರಾಜ್ಯ

ಇತ್ತೀಚೆಗಷ್ಟೇ ದೊಡ್ಡ ಪ್ರಮಾಣದಲ್ಲಿ ಮಂಡ್ಯದ ಆಲೆ ಮನೆಯೊಂದರಲ್ಲಿ ಭ್ರೂಣ ಹತ್ಯೆ ನಡೆದ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಅದೇ ರೀತಿಯ ಪ್ರಕರಣವೊಂದು ಬಯಲಾಗಿದ್ದು, ಭ್ರೂಣ ಹತ್ಯೆ ನಡೆಯುತ್ತಿದ್ದ ವೇಳೆಯೇ ಅಧಿಕಾರಿಗಳು ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಆನಂದ್ ಹಾಗೂ ಅಶ್ವಿನಿ ಎಂದು ಗುರುತಿಸಲಾಗಿದೆ. ಇದರೊಂದಿಗೆ ಮತ್ತೋರ್ವ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆನಂದ್ ಆಂಬುಲೆನ್ಸ್ ಡ್ರೈವರ್ ಆಗಿದ್ದು, ಅಶ್ವಿನಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಡಿ ಗ್ರೂಪ್ ನೌಕರರಾಗಿದ್ದಾರೆ. ಆನಂದ್ ಗೆ ಪಾಂಡವರಪುರದಲ್ಲಿ ಅಲರ್ಟ್ ಆಗಿದ್ದ ಸರಕಾರಿ ಕ್ವಾರ್ಟರ್ಸ್ ನಲ್ಲಿ ಆರೋಪಿಗಳು ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸರಿಂದ ಜಂಟಿ ಕಾರ್ಯಾಚರಣೆ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಡಿಹೆಚ್ಒ ಡಾ. ಮೋಹನ್, ಪಿಹೆಚ್ಒ ಡಾ.ಅರವಿಂದ್ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮಹಿಳೆಯೋರ್ವರನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.