ಕೋಟಾ ಶ್ರೀನಿವಾಸ ಪೂಜಾರಿಗೆ ಲಂಚ ಸಂದಾಯವಾಗಿದೆ: ಗೂಳಿಹಟ್ಟಿ

ಕರಾವಳಿ

ಭೋವಿ ನಿಗಮದ ಭ್ರಷ್ಟಾಚಾರ ಪ್ರಕರಣ ಎಸ್ಐಟಿಗೆ ಸಾಧ್ಯತೆ.?

ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಂಕಷ್ಟ.? ಬಿಜೆಪಿ ಅಧಿಕಾರವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರವಾಗಿದ್ದು, ಅಂದಿನ ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿಗೆ ಲಂಚ ಸಂದಾಯವಾಗಿದೆ ಎಂದು ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣದ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ದಳವನ್ನು ರಚನೆ ಮಾಡಲು ತೀರ್ಮಾನಿಸಿದೆ ಎಂದು ವರದಿಯಾಗಿದೆ.ವಾಲ್ಮೀಕಿ ನಿಗಮದ ಪ್ರಕರಣವನ್ನು ಈಗಾಗಲೇ ಸರ್ಕಾರ ಎಸ್‍ಐಟಿ ತನಿಖೆಗೆ ವಹಿಸಿದೆ. ಇದರ ನಂತರ ಭೋವಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣವನ್ನು ಎಸ್‍ಐಟಿಗೆ ವಹಿಸಲು ಸರ್ಕಾರ ನಿರ್ಧಾರಿಸಿದೆ ಎನ್ನಲಾಗಿದೆ.

ಮಾಜಿ ಶಾಸಕ ಗೂಳಿಹಳ್ಳಿ ಶೇಖರ್ ರವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಬೊಮ್ಮಾಯಿ ಸಿಎಂ ಆಗಿದ್ದಾಗ ಕೊನೆಯ ಮೂರು ತಿಂಗಲು ಭೋವಿ ನಿಗಮದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ಗಮನಕ್ಕೆ ಬಂದಿದೆ. ಸಚಿವರಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿಗೂ ಇದರಲ್ಲಿ ಪಾಲಿದೆ ಎಂದು ಶೇಖರ್ ಆರೋಪಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ರಾಜೀನಾಮೆ ನೀಡಬೇಕೆಂದು ಬಿಜೆಪಿ ಹೋರಾಟ ಮಾಡುತ್ತಿದೆ. ಇದೇ ವೇಳೆ ಕೋಟಾ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿರುವುದು ಸಂಚಲ ಸೃಷ್ಟಿಸಿದೆ.