ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್

ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್ ಅವರಿಗೆ ವರ್ಗಾವಣೆಯಾಗಿದ್ದು, ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ರವಿಚಂದ್ರ ನಾಯಕ್ ಅವರು ಶಿವಮೊಗ್ಗ ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದರು. ಮಂಗಳೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ರವಿಚಂದ್ರ ನಾಯಕ್ ಅವರು ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ, ಮಂಗಳೂರು ಉಪವಿಭಾಗಾಧಿಕಾರಿ, ತಹಶೀಲ್ದಾರ್ ಆಗಿಯೂ ಸೇವೆ ಸಲ್ಲಿಸಿದ್ದರು. ಇವರು ಕರ್ತವ್ಯದಲ್ಲಿ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸರಳತೆಗೆ ಹೆಸರಾಗಿದ್ದವರು. ಸರಳವಾಗಿ, ನ್ಯಾಯಯುತವಾಗಿ ಹಾಗೂ ಎಲ್ಲರಿಗೂ ಗೌರವ ಕೊಡುವ ಮನೋಭಾವ ಹೊಂದಿರುವ ಅಪರೂಪದ ಅಧಿಕಾರಿ ರವಿಚಂದ್ರ ನಾಯಕ್.