ರಾಷ್ಟ್ರಮಟ್ಟದಲ್ಲಿ ಸುದ್ಧಿಯಾಗಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: ಹಿಂದೂ ಸಂಘಟನೆಯ ಕಾರ್ಯಕರ್ತರು ದೋಷಮುಕ್ತ

ಕರಾವಳಿ

ರಾಷ್ಟ್ರಮಟ್ಟದಲ್ಲಿ ಸುದ್ಧಿಯಾಗಿದ್ದ ಮಂಗಳೂರು ಪಡೀಲ್ ಹೋಂ ಸ್ಟೇ ದಾಳಿ ಪ್ರಕರಣದ ಆರೋಪಿಗಳನ್ನು ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ದೋಷಮುಕ್ತ ಗೊಳಿಸಿ ಅಂತಿಮ ತೀರ್ಪು ಪ್ರಕಟಿಸಿದೆ.

2012 ರ ಜುಲೈ 28 ರಂದು ಪಡೀಲ್ ಹೋಂ ಸ್ಟೇ ಯಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ ಯುವತಿಯರ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಹಲ್ಲೆ ನಡೆಸಿದ್ದರು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಮಂಗಳೂರಿನಲ್ಲಿ ತಾಲಿಬಾನಿ ಕೃತ್ಯ ರಾಷ್ಟ್ರೀಯ ಮಾಧ್ಯಮಗಳು ಬಣ್ಣಿಸಿದ್ದವು.

ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ ಯುವತಿಯರು ಹೈ ಪ್ರೊಫೈಲ್ ಹಿನ್ನೆಲೆ ಹೊಂದಿದವರಾಗಿದ್ದರು. ಅದರಲ್ಲೂ ಇಬ್ಬರು ಯುವತಿಯರು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಪುತ್ರಿಯರು ಆಗಿದ್ದರು.

ಪೊಲೀಸರು 44 ಮಂದಿಯ ಮೇಲೆ ಆರೋಪ ಪಟ್ಟಿ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದೀಗ ಸುದೀರ್ಘ 12 ವರ್ಷಗಳ ವಿಚಾರಣೆ ಬಳಿಕ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಗಳನ್ನು ದೋಷಮುಕ್ತಗೊಳಿಸಿ ಅಂತಿಮ ತೀರ್ಪು ನೀಡಿದೆ.