ಹೆಗ್ಗುಂಜಿ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಆನ್‌ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್

ಕರಾವಳಿ

ಉಡುಪಿ : ಐಐಟಿ ಮದ್ರಾಸ್ ಪ್ರವರ್ತಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನು ನಡೆಸಿಕೊಡುವ ಯೋಜನೆ ಹೆಗ್ಗುಂಜಿ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ.

ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಐಐಟಿ ಯಂತಹ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಿದ್ದೇನೆ ಎಂದು ಉದ್ಯಮಿ ಡಾ. ಎಚ್.ಎಸ್. ಶೆಟ್ಟಿ ಹೇಳಿದರು.

ಅವರು ಆಗಸ್ಟ್ 15ರಂದು ಉಚ್ಚಿಲ ಮೊಗವೀರ ಭವನದಲ್ಲಿ 20 ವಿದ್ಯಾ ಸಂಸ್ಥೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸರಕಾರಿ ಹೈಸ್ಕೂಲ್ ಮತ್ತು ಸದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭವಾಗಲಿರುವ ಐ.ಐ.ಟಿ. ಮದ್ರಾಸ್ ಅವರ ಸಹಯೋಗದೊಂದಿಗೆ ಆನ್‌ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್ ಉದ್ಘಾಟನಾ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪ್ರಸಕ್ತ 2024-25ನೇ ಸಾಲಿನಲ್ಲಿ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಐ.ಐ.ಟಿ. ಮದ್ರಾಸ್ ಅವರ ಸಹಯೋಗದೊಂದಿಗೆ ಆನ್‌ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್ ಆಯೋಜಿಸಲಾಗಿದೆ.

ಉಡುಪಿ ಜಿಲ್ಲೆಯ ವಿವಿಧ ಸರಕಾರಿ ಹೈಸ್ಕೂಲ್ ಮತ್ತು ಸದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿ, ಇದನ್ನು ಕರಾವಳಿಯ ಎಲ್ಲಾ 150 ಹೈಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ವಿಸ್ತರಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ದಿ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ನಾಗರಾಜ್ ಶೆಟ್ಟಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು.