ವಿದೇಶದಲ್ಲಿ ಉದ್ಯೋಗದಲ್ಲಿದ್ದ ಕೊಣಾಜೆ ಗ್ರಾಮದ ಯುವಕ ಮೃತ್ಯು

ಕರಾವಳಿ

ಕೊಣಾಜೆ ಗ್ರಾಮದ ನಡುಪದವು ನಿವಾಸಿ ಉಮ್ಮರ್ ಅವರ ಪುತ್ರ ನೌಫಲ್( 25) ಅಬುಧಾಬಿಯಲ್ಲಿ ಎ.ಸಿ.ಮೆಕ್ಯಾನಿಕ್ ವೃತ್ತಿಯಲ್ಲಿದ್ದರು. ಬಹುಮಹಡಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆಯತಪ್ಪಿ ಕೆಳಕ್ಕೆ ಬಿದ್ದ ನೌಫಲ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆನ್ನಲಾಗಿದೆ. ಮೃತರು ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿಯವರ ಸಹೋದರನಾಗಿದ್ದು ಮೃತದೇಹವನ್ನು ಹುಟ್ಟೂರಿಗೆ ತರುವ ವ್ಯವಸ್ಥೆ ಮಾಡಿದ್ದಾರೆ.