ವಿಟ್ಲ-ಅಡ್ಯನಡ್ಕ ರಸ್ತೆಯ ಕುದ್ದುಪದವು ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ ಅಂಗಡಿ ಮಾಲಿಕ ಮಹಮ್ಮದ್ ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಕೇರಳದ ಆನೇಕಲ್ಲು ಸಮೀಪದ ಗುವೆದಪಡ್ಪು ಎಂಬಲ್ಲಿ ಬಂಧಿಸಿದ್ದಾರೆ.
ಕುದ್ದುಪದವು ಜಂಕ್ಷನಲ್ಲಿನ ಎ.ಎಂ.ಸ್ಟೋರ್ ಮಾಲಿಕ ಅಂಗಡಿಗೆ ಬಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಅಂಗಡಿ ಮಾಲಿಕ ಅಶ್ರಫ್ ಪರಾರಿಯಾಗಿದ್ದ. ಘಟನೆ ನಡೆದು 48ಗಂಟೆಯಲ್ಲೇ ಆರೋಪಿ ಅಶ್ರಫ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ವಿಟ್ಲ ಪೊಲೀಸರ ಕಾರ್ಯ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದೆ. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.