ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆಗೈದ ಪೊಲೀಸ್ ಅಧಿಕಾರಿಗಳಿಗೆ ಸ್ವಾತಂತ್ರ್ಯೋತ್ಸವದ ನಿಮಿತ್ತ ಪ್ರತಿವರ್ಷ ನೀಡಲಾಗುವ ವಿವಿಧ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 1,037 ಸೇವಾ ಪದಕವನ್ನು ಕೇಂದ್ರ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿಗೆ ಘೋಷಣೆ ಮಾಡಲಾಗಿದ್ದು, ಇದರಲ್ಲಿ 208 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದರೆ.ಕರ್ನಾಟಕದ ರಾಜ್ಯದ 19 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
ಐಪಿಎಸ್ ಅಧಿಕಾರಿ ಚಂದ್ರಶೇಖರ್ ಎಂ (ಎಡಿಜಿಪಿ, ಐಎಸ್ಡಿ, ಬೆಂಗಳೂರು) ಅವರು ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಅವರು ಈ ಹಿಂದೆ ಮಂಗಳೂರು ಪೊಲೀಸ್ ಕಮೀಷನರ್ ಆಗಿಯೂ ಉತ್ತಮ ಸೇವೆ ಸಲ್ಲಿಸಿದ್ದಾರೆ. ನಿಷ್ಠಾವಂತ, ನೇರ ನಡೆ ನುಡಿಯ ಜನಸ್ನೇಹಿ ಅಧಿಕಾರಿಯಾಗಿ ಮಂಗಳೂರಿಗರ ಮನಗೆದ್ದಿದ್ದರು. ಮಂಗಳೂರಿನ ನಾಗರಿಕರು ಚಂದ್ರಶೇಖರ್ ರವರನ್ನು ಈಗಲೂ ನೆನಪಿಸಿಕೊಳ್ಳುತ್ತಿದ್ದಾರೆ. ಉಳಿದ 18 ಮಂದಿ ಪೊಲೀಸ್ ಅಧಿಕಾರಿಗಳು ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಎಲ್ಲಾ ಅಧಿಕಾರಿಗಳಿಗೂ ಶುಭವಾಗಲಿ ಎಂದು ಹಾರೈಸೋಣ.