ಮೂಡಬಿದಿರೆ: ಸಿಂಗಂ ಸಂದೇಶ್ ಅವರಿಗೆ ಮುಖ್ಯಮಂತ್ರಿ ಪದಕ ಗೌರವ

ರಾಜ್ಯ

ಮೂಡಬಿದಿರೆಯ ಸಿಂಗಂ ಎಂದೇ ಪ್ರಖ್ಯಾತಿ ಪಡೆದಿರುವ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಕರ್ತವ್ಯ ನಿರ್ವಹಿಸಿದ ಕಡೆಗಳಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿ ಎಂಬ ಖ್ಯಾತಿಗೆ ಪಾತ್ರರಾಗಿದ್ದು, ಡೇರಿಂಗ್ ಇಮೇಜಿನಿಂದ ಸಾರ್ವಜನಿಕ ವಲಯದಲ್ಲಿ ಅಪಾರ ಪ್ರಸಿದ್ಧಿ ಪಡೆದಿದ್ದಾರೆ. ಇವರ ಸೇವೆ ಗುರುತಿಸಿ ಕರ್ನಾಟಕ ಸರಕಾರ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಈ ಪ್ರಶಸ್ತಿಗೆ ಅರ್ಹರಾಗಿದ್ದಾರೆ.

ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಸಂದೇಶ್ ಪ್ರಸ್ತುತ ಮೂಡಬಿದಿರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.