ತ್ರಿವಳಿ ತಲಾಖ್ ಅಸಂವಿಧಾನಿಕ ಎಂದು ಸುಪ್ರೀಂ ಕದ ತಟ್ಟಿದ್ದ ಜಮೀಯತ್ ಉಲೇಮಾ ಎ ಹಿಂದ್, ಸಮಸ್ತ ಕೇರಳ ಜಂಇಯ್ಯತುಲ್ ಉಲೆಮಾ

ರಾಷ್ಟ್ರೀಯ

ತನ್ನ ನಡೆಯನ್ನು ಸಮರ್ಥಿಸಿ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರಕಾರ

ಕೇಂದ್ರ ಸರಕಾರ 2019 ರಲ್ಲಿ ಜಾರಿಗೆ ತಂದಿರುವ ಮುಸ್ಲಿಂ ಮಹಿಳೆಯರ ವಿವಾಹದ ಹಕ್ಕುಗಳ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 4 ರಲ್ಲಿ ತ್ರಿವಳಿ ತಲಾಖ್ ಅನ್ನು ಗಂಭೀರ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲಾಗಿದೆ. ಈ ಅಪರಾಧಕ್ಕೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಕಾಯ್ದೆಯನ್ನು ಕೇಂದ್ರ ಸರಕಾರ ಸಂಸತ್ತಿನಲ್ಲಿ ಅಂಗೀಕರಿಸಿತ್ತು.

ಈ ಕಾಯ್ದೆಯ ವಿರುದ್ಧ ದೇಶದಾದ್ಯಂತ ಮುಸ್ಲಿಂ ಸಮುದಾಯ ಆಕ್ರೋಶವನ್ನು ವ್ಯಕ್ತಪಡಿಸಿತ್ತು. ಮುಸ್ಲಿಂ ಶರೀಅತ್ ವಿರುದ್ಧ ಸರಕಾರ ಹಸ್ತಕ್ಷೇಪ ಕ್ಕೆ ಮುಂದಾಗಿದೆ ಎಂದು ಮುಸ್ಲಿಂ ಸಂಘಟನೆಗಳು ಆರೋಪಿಸಿತ್ತು. ತ್ರಿವಳಿ ತಲಾಖ್ ಕಾಯ್ದೆ ಸಂವಿಧಾನ ಬಾಹಿರ ಎಂದು ಘೋಷಿಸಿ ರದ್ದುಪಡಿಸುವಂತೆ ಜಮೀಯತ್ ಉಲೇಮಾ ಎ ಹಿಂದ್ ಹಾಗೂ ಸಮಸ್ತ ಕೇರಳ ಜಂಇಯ್ಯತುಲ್ ಉಲೆಮಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಆದರೆ ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರಕಾರ ತನ್ನ ನಿರ್ಧಾರವನ್ನು ಸಮರ್ಥಿಸಿದ್ದು, ತ್ರಿವಳಿ ತಲಾಖ್ ಕಾಯ್ದೆ ಮುಸ್ಲಿಂ ಮಹಿಳೆಯರ ನ್ಯಾಯ ಮತ್ತು ಸಮರ್ಥನೆಯನ್ನು ಎತ್ತಿ ಹಿಡಿಯುತ್ತೆ ಎಂದು ಅಫಿಡವಿಟ್ ಸಲ್ಲಿಸಿದೆ. ಮುಂದೆ ಸುಪ್ರೀಂ ಕೋರ್ಟ್ ತೀರ್ಪು ಯಾರ ಪರ ಬರಬಹುದು ಅನ್ನುವ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.