14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ 25 ಹರೆಯದ ಯುವಕನೊಬ್ಬ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಕೊಲ್ಕತ್ತಾ ಹೈಕೋರ್ಟ್ ರದ್ದುಪಡಿಸಿತ್ತು. ಈ ಪ್ರಕರಣದಲ್ಲಿ ಸಂತ್ರಸ್ತೆಗೆ ಮಗುವಾದ ಕಾರಣ ಸ್ಥಳೀಯವಾಗಿ ರಾಜಿ ಪಂಚಾತಿಕೆ ಮೂಲಕ ಆಕೆ ಆತನ ಜೊತೆ ವಾಸವಾಗಿದ್ದಳು. ಈ ಕಾರಣದಿಂದ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿತ್ತು.
ಆದರೆ ಇದೀಗ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಹೈಕೋರ್ಟ್ ತೀರ್ಪು ಕಾನೂನು ಬದ್ಧವಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಭಯ ಶ್ರೀನಿವಾಸ್ ಓಕ ಹಾಗೂ ಉಜ್ವಲ್ ಭಯಾನ್ ಅವರಿದ್ದ ನ್ಯಾಯಪೀಠ ಆರೋಪಿ ಮತ್ತು ಸಂತ್ರಸ್ತರ ಮಧ್ಯೆ ಒಪ್ಪಂದ ಆಗಿದೆ ಅನ್ನುವ ಕಾರಣಕ್ಕೆ ಲೈಂಗಿಕ ಅಪರಾಧಿಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ದಾಖಲಿಸಿದ ಪ್ರಕರಣಗಳನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯರು ಲೈಂಗಿಕ ಕ್ರಿಯೆಗೆ ಸಮ್ಮತಿ ನೀಡಿದರೂ, ಅದು ಶೋಷಣೆ ಆಗಿದೆಯೇ ವಿನಃ ಪ್ರಣಯ ಸಂಬಂಧ ಆಗಲಾರದು ಎಂದು ಅಭಿಪ್ರಾಯಪಟ್ಟಿದೆ.