ಪೊಲೀಸ್ ನೇಮಕಕ್ಕೆ ವಯೋಮಿತಿ ಕನಿಷ್ಠ 16 ಕ್ಕೆ ಇಳಿಸುವಂತೆ, ಗರಿಷ್ಠ 40ಕ್ಕೆ ಹೆಚ್ಚಿಸುವಂತೆ ಬೇಡಿಕೆ
ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಪೊಲೀಸ್ ನೇಮಕಕ್ಕೆ ವಯೋಮಿತಿ 16 ವರ್ಷಕ್ಕೆ ಇಳಿಸುವ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇತ್ತೀಚೆಗೆ ತಿಳಿಸಿದ್ದಾರೆ. ಪೊಲೀಸ್ ನೇಮಕಾತಿಗೆ ಕನಿಷ್ಠ ವಯೋಮಿತಿಯನ್ನು 16 ವರ್ಷಕ್ಕೆ ಇಳಿಸುವುದು ಹಾಗೂ ಗರಿಷ್ಠ ವಯೋಮಿತಿಯನ್ನು 40 ವರ್ಷಗಳಿಗೆ ಹೆಚ್ಚಿಸುವಂತೆ ಯುವಕರು ಬೇಡಿಕೆ ಇಟ್ಟಿದ್ದಾರೆ.ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಪ್ರತಿವರ್ಷ 2,500 ಹುದ್ದೆಗಳು ತೆರವಾಗುತ್ತಿವೆ. ನೇಮಕ ಮಾಡಿಕೊಳ್ಳಲು ಕಾಲಕಾಲಕ್ಕೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ವಿವಿಧ ಹಂತದ 3,500 ಹುದ್ದೆಗಳ ನೇಮಕ ಪ್ರಕ್ರಿಯೆ ಹೆಚ್ಚುವರಿ ಪೊಲೀಸರ ಮಹಾನಿರ್ದೆಶಕರ ಹಂತದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.