ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಕರುಣಾಕರ ನಾಯ್ತೊಟ್ಟು, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ್ ಆಯ್ಕೆ.

ಕರಾವಳಿ

ಚುನಾವಣೆ ಮುಗಿದು ಮೂರು ವರ್ಷಗಳ ಬಳಿಕ ವಿಟ್ಲ ಪಟ್ಟಣ ಪಂಚಾಯತಿನ ಆಡಳಿತ ನಡೆಸುವ ಭಾಗ್ಯ ಬಿಜೆಪಿಗೆ ಒಲಿಯಿತು. 18 ಸದಸ್ಯ ಬಲದ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ-12, ಕಾಂಗ್ರೆಸ್-5, ಎಸ್ಡಿಪಿಐ ಒಬ್ಬ ಸದಸ್ಯರನ್ನು ಹೊಂದಿದೆ. ಮೀಸಲಾತಿ ಪಟ್ಟಿ ಆಧಾರದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಕರುಣಾಕರ ನಾಯ್ತೊಟ್ಟು, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸಂಗೀತಾ ಜಗದೀಶ್ ಪನೆಮಜಲು ನಾಮಪತ್ರ ಸಲ್ಲಿಸಿದ್ದರು.

ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಅಭ್ಯರ್ಥಿಯಿಲ್ಲದ ಕಾರಣ ಚುನಾವಣೆಯಿಂದ ಹಿಂದೆ ಸರಿದಿದೆ. ಚುನಾವಣಾ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾ ಕರ್ತವ್ಯ ನಿರ್ವಹಿಸಿದರು