ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರ ಕಾರ್ಯಾಚರಣೆ; ಮನೆ ಕಳ್ಳತನ ಪ್ರಕರಣದ ಆರೋಪಿಯ ಬಂಧನ, ಸೊತ್ತುಗಳ ವಶ.

ಕರಾವಳಿ

ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆ ಎಂಬಲ್ಲಿ ಆಗಸ್ಟ್ 30ರಂದು ನಡೆದ ಮನೆ ಕಳ್ಳತನ ಪ್ರಕರಣದ ಖದೀಮನ ಬಂಧಿಸಿ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಾಳ ನಿವಾಸಿ ಸಂತೋಷ್ ಟಿ.( 32)ಬಂಧಿತ ಆರೋಪಿ. ಮನೆಯವರೆಲ್ಲ ನಿದ್ರಿಸುತ್ತಿದ್ಜ ಕೋಣೆಯ ಒಳಗೆ ನುಗ್ಗಿದ್ದ ಕಳ್ಳ ಕಪಾಟಿನ ಬೀಗ ಮುರಿದು ಸುಮಾರು 10.05 ಲಕ್ಷ ಮೌಲ್ಯದ 33 ಪವನ್ ತೂಕದ ಚಿನ್ನಾಭರಣ ಲಪಟಾಯಿಸಿದ್ಜನು. ಈ ಬಗ್ಗೆ ಮನೆ ಮಾಲಿಕರು ನೀಡಿದ ದೂರಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಕಾರ್ಕಳ ಗ್ರಾಮಾಂತರ ಪೊಲೀಸ್ ತಂಡ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂತೋಷ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿಯ ವಶದಲ್ಲಿದ್ದ ಕಳ್ಳತನದ ಸೊತ್ತುಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಬೈಕನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಕಾರ್ಯಚರಣೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.