ಜಮ್ಮು ಮತ್ತು ಕಾಶ್ಮೀರದ ವಿಧಾಸಭೆ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಲಿದೆ. ಇಂಡಿಯಾ ಮೈತ್ರಿಕೂಟ ಭರ್ಜರಿ ಗೆಲುವು ಸಾದಿಸಲಿದೆ. ಸಮೀಕ್ಷೆಯಲ್ಲಿ ಬಹಿರಂಗ

ರಾಷ್ಟ್ರೀಯ

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18ರಂದು ಮೊದಲ ಹಂತ, 25ರಂದು ಎರಡನೇ ಹಂತ ಮತ್ತು Oct ಒಂದರಂದು ಮೂರನೇ ಹಂತದ ಮತದಾನ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ 4 ರ ಬದಲು ಅಕ್ಟೋಬರ್ 8 ರಂದು ಪ್ರಕಟಿಸಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ತಮ್ಮದೇ ಆದ ಹಲವು ತಂತ್ರಗಾರಿಕೆಯನ್ನ ನಡೆಸಿವೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ರಾಜಕೀಯ ಪಕ್ಷಗಳು ತಮ್ಮ ತಮ್ಮ ಚುನಾವಣಾ ತಯಾರಿಯಲ್ಲಿ ನಿರತವಾಗಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕೆ ಇಳಿದಿದೆ.

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆ ಚುನಾವಣೆ ಕುರಿತು Election Tracker ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಇಂಡಿಯಾ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ 45 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಇತ್ತ ಬಿಜೆಪಿಯೂ 20 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಸಮೀಕ್ಷೆ ಮೂಲಕ ಬಹಿರಂಗವಾಗಿದೆ. ಇನ್ನೂ ಪಿಡಿಪಿ 12 ಹಾಗೂ ಇತರೆ ಎರಡು ಕ್ಷೇತ್ರಗಳಲ್ಲಿ ಗೆಲುವಿನ ಸಂಖ್ಯೆಯನ್ನು ಸ್ಪಷ್ಟಪಡಿಸಲಿವೆ ಎಂದು ಸಮೀಕ್ಷೆ ತಿಳಿಸಿದೆ. ಒಟ್ಟಾರೆ ದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಗೆ ಈ ಬಾರಿಯ ಜಮ್ಮು-ಕಾಶ್ಮೀರದಲ್ಲಿ ತನ್ನ ಹಿಡಿತ ಸಾಧಿಸುವಲ್ಲಿ ವಿಫಲವಾಗಲಿದೆ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದ್ದು, ಇಂಡಿಯೂ ಮೈತ್ರಿಕೂಟಕ್ಕೆ ಭರ್ಜರಿ ಜನ ಸಿಗಲಿದೆ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದೆ.