ಪುತ್ತೂರಿನ ಒಳಮೊಗ್ರು ಗ್ರಾಮದ ಕುಟಿನೋಪಿನಡ್ಕ ಎಂಬಲ್ಲಿ ಸರಕಾರಿ ಗುಡ್ಡ ಪ್ರದೇಶದಲ್ಲಿ ಕೋಳಿ ಅಂಕ ಜೂಜು ಅಡುತ್ತಿರುವ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪಿ ಎಸ್ ಐ ಜಂಬೂರಾಜ್ ಮಹಾಜನ್ ರವರ ನೇತೃತ್ವದಲ್ಲಿ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿಗೆ ಹೆದರಿ ಇತರರು ಸ್ಥಳದಿಂದ ಓಡಿ ಹೋಗಿದ್ದಾರೆ.
ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜು ಆಡುತ್ತಿರುವುದು ಪತ್ತೆಯಾಗಿದ್ದು, ಆರೋಪಿಗಳಿಂದ ಒಟ್ಟು 7710 ರೂಪಾಯಿ ನಗದು, 5 ಕೋಳಿಗಳು ಮತ್ತು ಕೋಳಿ ಕಾಲಿಗೆ ಕಟ್ಟಲು ಬಳಸಿದ 5 ಬಾಳುಕತ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ,ಕ್ರ 123-2024 ಕಲಂ:- 87 ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ.